ರಾಜ್ಯದಲ್ಲಿ 5562 ಗ್ರಾಮ ಪಂಚಾಯಿತಿಗಳಿಗೆ ಸ್ವಂತ ಕಟ್ಟಡ
· ರಾಜ್ಯದಲ್ಲಿ
ಹಾಲಿ ಇರುವ ಒಟ್ಟು 6022 ಗ್ರಾಮ ಪಂಚಾಯತಿಗಳ ಪೈಕಿ 5562 ಗ್ರಾಮ ಪಂಚಾಯಿತಿಗಳಿಗೆ ಸ್ವಂತ ಕಟ್ಟಡವಿದೆ.
·
460 ಗ್ರಾಮ
ಪಂಚಾಯಿತಿಗಳಿಗೆ ಸ್ವಂತ ಕಟ್ಟಡ ಇರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ಯ ಸಚಿವ ಹೆಚ್.ಕೆ. ಪಾಟೀಲ್ ಅವರು ತಿಳಿಸಿದರು.
·
ವಿಧಾನ ಪರಿಷತ್ ಸದಸ್ಯ ಜಿ. ರಘು ಅವರ ಪ್ರಶ್ನೆಗೆ ಉತ್ತರಿಸುತ್ತಾ,
ಸ್ವಂತ ಕಟ್ಟಡ ಹೊಂದಿಲ್ಲದ ಹೊಸದಾಗಿ ರಚನೆಯಾದ 460 ಗ್ರಾಮ ಪಂಚಾಯಿತಿಗಳಿಗೆ ತಲಾ 40 ಲಕ್ಷ ರೂ. ಅಂದಾಜು
ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸದನಕ್ಕೆ ತಿಳಿಸಿದರು.
·
ಈವರೆಗೂ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಮತ್ತು
ರಾಜೀವ್ ಗಾಂಧಿ ಸೇವಾ ಕೇಂದ್ರ ನಿರ್ಮಾಣಕ್ಕಾಗಿ
ಪ್ರತಿ ಗ್ರಾಮ ಪಂಚಾಯಿತಿಗೆ 16.25 ಲಕ್ಷ ರೂ. ಲಭ್ಯವಿರುತ್ತದೆ ಎಂದರು.
Source: web8.kar.nic.in


No comments:
Post a Comment