ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
·
ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ವೃಂದಗಳ 5 ಹುದ್ದೆಗಳಿಗೆ ನಿಯೋಜನೆ ಮೇಲೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
·
ಅಪರ ಪೊಲೀಸ್ ಅಧೀಕ್ಷಕರು, ಪೊಲೀಸ್ ಅಧೀಕ್ಷಕರು ಮತ್ತು ಮೇಲಿನ ಹಂತದ ಪೊಲೀಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವನ್ನು ನಿವೃತ್ತ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುತ್ತದೆ. ಈ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಲ್ಲಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ, ಶಾಖೆಯ ಸೆಕ್ಷನ್ ಆಫೀಸರ್ ಒಬ್ಬರು, ಸದಸ್ಯರಿಗೆ ಶೀಘ್ರಲಿಪಿಗಾರರು ಒಂದು ಹುದ್ದೆ, ಸಹಾಯಕರು ಒಂದು ಹುದ್ದೆ, ಕೋರ್ಟ್ ಕೆಲಸ ನಿರ್ವಹಿಸಲು ಬೆಂಚ್ ಕ್ಲರ್ಕ್ ಒಂದು ಹುದ್ದೆ ಒಟ್ಟು 05 ಹುದ್ದೆಗಳು ಖಾಲಿ ಇವೆ.
·
ಖಾಲಿ ಇರುವ ಮೇಲ್ಕಂಡ ವೃಂದದ ಹುದ್ದೆಗಳನ್ನು ಕರ್ನಾಟಕ ಸರ್ಕಾರ ವಿವಿಧ ಇಲಾಖೆಯಲ್ಲಿ ಸೇವೆಯಲ್ಲಿರುವ ಸರ್ಕಾರಿ ನೌಕರರಿಂದ ನಿಯೋಜನೆ ಮೇಲೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
·
ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಇಚ್ಛೆಯುಳ್ಳ ಸರ್ಕಾರಿ ನೌಕರರು ದಿನಾಂಕ 28-02-2017 ರ
ಒಳಗಾಗಿ ಅಧ್ಯಕ್ಷರು, ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ, ಕೊಠಡಿ ಸಂಖ್ಯೆ 36, ವಿಕಾಸ ಸೌಧ, ಬೆಂಗಳೂರು -560 001 ಇಲ್ಲಿಗೆ ತಮ್ಮ ಸೇವಾ ವಿವರಗಳೊಂದಿಗೆ ಮನವಿಯನ್ನು ಸಲ್ಲಿಸಲು ಸೂಚಿಸಲಾಗಿದೆ.
·
ದೂರು ಪ್ರಾಧಿಕಾರಗಳ ಬಗೆಗಿನ ಹೆಚ್ಚಿನ ಮಾಹಿತಿಯನ್ನು http://www.karnataka.gov.in/spca ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ.
Source: web8.kar.nic.in
Source: web8.kar.nic.in


No comments:
Post a Comment