ರೈತರು ಇನ್ಪುಟ್ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯ

·     2016 ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಬೆಳೆ ಹಾನಿ ಹೊಂದಿರುವ ರಾಜ್ಯದ ಫಲಾನುಭವಿ ರೈತರಿಗೆ ಇನ್ಫುಟ್ ಸಬ್ಸಿಡಿ ವಿತರಣೆಯನ್ನು ಮಾಡುವ ಸಲುವಾಗಿ ರಾಜ್ಯ ಸರ್ಕಾರವು ಪರಿಹಾರ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.

·        ಕೇಂದ್ರ ಸರ್ಕಾರದ ನೇರ ಹಣ ಸಂದಾಯ ಯೋಜನೆ (ಡಿಬಿಟಿ)ಯಡಿ ಪ್ರತಿ ಫಲಾನುಭವಿ ರೈತರು ಇನ್ಫುಟ್ ಸಬ್ಸಿಡಿ ಸವಲತ್ತನ್ನು ಪಡೆಯಲು ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಆಧಾರ್ ಜೋಡಣೆಗೆ ಒಪ್ಪಿಗೆ ನೀಡುವುದು ಕಡ್ಡಾಯವಾಗಿದೆ.

·        ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಬೆಳೆ ಹಾನಿ ಹೊಂದಿರುವ ಫಲಾನುಭವಿ ರೈತರು ಇನ್ಫುಟ್ ಸಬ್ಸಿಡಿ ಸೌಲಭ್ಯ ಪಡೆಯುವ ಸಲುವಾಗಿ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಮೊಬೈಲ್ ಸಂಖ್ಯೆ ವಿವರ ಮತ್ತು ಆಧಾರ್ ಜೋಡಣೆ ಪತ್ರದೊಂದಿಗೆ ಸಂಬಂಧಪಟ್ಟ ಬ್ಯಾಂಕಿಗೆ ದಿನಾಂಕ: 10-3-2017 ರೊಳಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿಯನ್ನು ಸಲ್ಲಿಸುವಂತೆ ಸರ್ಕಾರದ ಕಾರ್ಯದರ್ಶಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


No comments:

Post a Comment

Popular Posts

Tags